ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಬ್ಬರ ಬಂಧನ

crime
Published on

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಮನೆ ಖಾಲಿ ಮಾಡಿಕೊಂಡು ಹೋಗಿದ್ದ ಇಬ್ಬರನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಲ್ತ್ಾ ಮತ್ತು ರೋಜ್ ಪಾಷಾ ಬಂಧಿತ ಆರೋಪಿಗಳು. ಕೆ.ಎಸ್. ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ, ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಗೊತ್ತಿದ್ದರೂ ಸಹ ಹಾಜರಾಗದೇ ಠಾಣೆಗೆ ನೀಡಿರುವ ವಿಳಾಸದಲ್ಲಿದ್ದ ಮನೆಯನ್ನು ಖಾಲಿ ಮಾಡಿಕೊಂಡು ಹೋಗಿದ್ದರು. ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net