ವಿಡಿಯೋ ಚಿತ್ರಕರಣ ಮಾಡಿದವರನ್ನು ಬಂಧಿಸಿ

28ckm6-manavi
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಹಿಂದು ಯುವತಿಯರ ವಿಡಿಯೋ ಚಿತ್ರೀಕರಣ ಮಾಡಿರುವ ಮುಸ್ಲಿಂ ಯುವತಿಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ಗೆ ಮನವಿ ಸಲ್ಲಿಸಿದರು.
Published on

ಚಿಕ್ಕಮಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ಹಿಂದು ಯುವತಿಯರ ವಿಡಿಯೋ ಚಿತ್ರೀಕರಣ ಮಾಡಿರುವ ಮುಸ್ಲಿಂ ಯುವತಿಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮುಸ್ಲಿಂ ಯುವತಿಯರು ವಿಡಿಯೋ ಚಿತ್ರೀಕರಣ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ. ಕೋಮುವಿನವರೊಂದಿಗೆ ವಿಡಿಯೋ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದ್ದು ಹಿಂದು ಯುವತಿಯರನ್ನು ಜಿಹಾದ್‌ನ ಬಲೆಗೆ ಸಿಕ್ಕಿಸುವ ಅಂತರಿಕ ಘಟನೆ ಸದ್ದು ಮಾಡುತ್ತಿದೆ ಎಂದು ನಗರ ಕಾರ್ಯದರ್ಶಿ ರಾಕೇಶ್ ಮರಡಿ ದೂರಿದರು.
ಘಟನೆಯ ಸೂಕ್ಷ್ಮತೆ ಮತ್ತು ಗಂಭೀರತೆ ಗಮನಿಸಿ ಬೇರೆ ಯಾವುದೇ ಕಾಲೇಜುಗಳಲ್ಲಿ ಮರುಕಳಿಸದಂತೆ ಎಚ್ಚರವಹಿಸಬೇಕು. ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಸತ್ಯಸತ್ಯೆತಿಳಿಯದೆ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ನಿಹಾರಿಕ, ಪದಾಧಿಕಾರಿಗಳಾದ ನಂದನ್,ಯಶವಂತ್, ಪ್ರೆಕ್ಷಿತು, ಧನುಷ್, ಸೂರ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net