ಕುಸ್ತಿ ಫೆಡರೇಶನ್ ಮುಖ್ಯಸ್ಥರನ್ನು ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ ರೈತ ಸಂಘಟನೆಗಳು

rakesh
Published on

ದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿರುವ ರೈತ ಮುಖಂಡರು, ಸಿಂಗ್​ರನ್ನು ಬಂಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ರೈತ ಸಂಘಟನೆಗಳು ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಒಗ್ಗಟ್ಟಿನಿಂದ ಸರಣಿ ಪ್ರತಿಭಟನೆಗಳನ್ನು ನಡೆಸಿವೆ. ಜೂನ್ 9ರೊಳಗೆ ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಬಂಧಿಸಬೇಕು. ಇಲ್ಲದಿದ್ದರೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕುಸ್ತಿಪಟುಗಳ ಕುಂದುಕೊರತೆಗಳನ್ನು ಸರ್ಕಾರ ಪರಿಹರಿಸಬೇಕು. ಕುಸ್ತಿಪಟುಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net