

ಕೋಲ್ಕತ್ತಾ: ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್ಗೆ ಹಾಜರುಪಡಿಸಿದ ವೇಳೆ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದೊಳಗೆ ದಿಢೀರ್ ಮೂರ್ಛೆ ಹೋಗಿದ್ದಾರೆ.
ನ್ಯಾಯಾಲಯದ ಒಳಗೆ ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಅರಣ್ಯ ಸಚಿವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದರು. ತಕ್ಷಣವೇ ಮಲ್ಲಿಕ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಬಾಲ್ಕನಿಗೆ ಕರೆದೊಯ್ದು ಕುಡಿಯಲು ನೀರು ಕೊಟ್ಟು ಸುಧಾರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).