

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸವಿದ್ದ ಮಹಿಳೆ ಮುಂದೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ಸುರಪುರ ಮೂಲದ ಬಾಲಪ್ಪ(೩೨) ಬಂಧಿತ ಆರೋಪಿ.
ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದಾರೆ. ಕೆಂಗೇರಿಯಲ್ಲಿ ವಾಸವಿದ್ದ ಆರೋಪಿಯು ಗಾರೆಕೆಲಸ ಮಾಡುತ್ತಿದ್ದ. ಆರೋಪಿ ಬಾಲಪ್ಪ ಕಳೆದೊಂದು ವರ್ಷದಿಂದ ಈ ಮಹಿಳೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಮಹಿಳೆ ಕಂಡಾಗ ಅಸಭ್ಯವಾಗಿ ವರ್ತಿಸುತ್ತಿದ್ದ. ಇದೇ ರೀತಿ ೆ.೧೮ ರಂದು ಕೂಡ ಈತ ತನ್ನ ಚಾಳಿಯನ್ನು ಮುಂದುವರಿಸಿದ್ದರಿಂದ ಮಹಿಳೆ ಸ್ಥಳೀಯರ ನೆರವಿನೊಂದಿಗೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುಲಿಕೇಶಿ ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಎ್ಐಆರ್ ದಾಖಲಿಸಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.