ಭಾರತೀಯ ಸಂಸ್ಕೃತಿಯಲ್ಲಿ ಕಲೆಗಿದೆ ಮಹತ್ವ

pratibhe
ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಿರಿಯಣ್ಣ ಹೆಗ್ಡೆ ಉದ್ಘಾಟಿಸಿದರು. ಎಸ್.ಎನ್.ಚನ್ನಬಸಪ್ಪ, ಶ್ರೀ ಸಾಯಿನಾಥ ಸ್ವಾಮೀಜಿ, ಎಚ್.ರವಿ ಇತರರಿದ್ದರು.
Published on

ಶಿವಮೊಗ್ಗ: ಭಾರತೀಯ ಸಂಸ್ಕೃತಿಯಲ್ಲಿ ಕಲೆಗೆ ಹೆಚ್ಚು ಮಹತ್ವ ನೀಡಲಾಗಿದೆ. ನಮ್ಮ ಜನಪದ ಕಲೆಗಳ ಸೊಗಡು ಅಪೂರ್ವವಾದುದು. ಪ್ರತಿ ಮಗುವಿನಲ್ಲೂ ಪ್ರತಿಭೆ ಎನ್ನುವುದು ಸುಪ್ತವಾಗಿರುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು.

ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಪ್ರತಿ ವಿದ್ಯಾರ್ಥಿಯೂ ಶ್ರದ್ಧೆಯಿಂದ ತನ್ನಲ್ಲಿರುವ ಕಲೆಯನ್ನು ಪ್ರದರ್ಶಿಬೇಕು ಎಂದರು.

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪಾಲಕರ ಕರ್ತವ್ಯ. ವಿವಿಧ ಹಂತಗಳಲ್ಲಿ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಮಕ್ಕಳು ಕೀಳರಿಮೆಯಿಲ್ಲದೆ ಭಾಗವಹಿಸಿ ಸಾಮರ್ಥ್ಯ ಪ್ರದರ್ಶನ ಮಾಡಬೇಕು ಎಂದು ತಿಳಿಸಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಶಿಕ್ಷಣ ಒಂದು ಭಾಗ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳ ಪ್ರಯೋಜನ ಪಡೆಯಬೇಕು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ರವಿ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಹಿರಿಯಣ್ಣ ಹೆಗ್ಡೆ, ವಾಸಪ್ಪ ಗೌಡ, ಸಿಆರ್‌ಪಿ ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net