ಜೈಲಿನಿಂದ ಹೊರಬಂದ ಬಳಿಕ ಸತ್ಯೇಂದರ್​ ಜೈನ್​ರನ್ನು ಭೇಟಿ ಮಾಡಿದ ಕೇಜ್ರಿವಾಲ್​

aap leader
Published on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದ ದೆಹಲಿ ಸರ್ಕಾರದ ಮಾಜಿ ಸಚಿವ ಸತ್ಯೇಂದರ್​ ಜೈನ್ರನ್ನು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸುಮಾರು ಒಂದು ವರ್ಷದಿಂದ ತಿಹಾರ್​ ಜೈಲಿನಲ್ಲಿರುವ ಸತ್ಯೇಂದರ್​ ಜೈನ್​ ಇತ್ತೀಚಿಗೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅರವಿಂದ್​ ಕೇಜ್ರಿವಾಲ್​ ಧೈರ್ಯಶಾಲಿಯನ್ನು ಭೇಟಿ ಮಾಡಿದೆ ಎಂದು ಸತ್ಯೇಂದರ್​ ಜೈನ್​ ಜೊತೆ ಮಾತುಕತೆ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ದಾಖಲಾಗಿರುವ ಸತ್ಯೇಂದರ್​ ಜೈನ್​ ಅವರಿಗೆ ಸುಪ್ರೀಂ ಕೋರ್ಟ್​ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

ಎಎಪಿ ನಾಯಕನಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್​ ಮಾಧ್ಯಮಗಳ ಜೊತೆ ಮಾತನಾಡದಂತೆ ಮತ್ತು ದೆಹಲಿಯನ್ನು ತೊರೆಯಬಾರದು ಎಂದು ತಾಕೀತು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net