ದೆಹಲಿ ಸಿಎಂ ಆಗಿ ಇಂದು ಕೇಜ್ರಿವಾಲ್ ಪ್ರಮಾಣ

Aravind Kejriwal 11 Feb 20
Published on

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಅರವಿಂದ ಕೇಜ್ರಿವಾಲ್ ಭಾನುವಾರ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಆದರೆ ಕಾರ್ಯಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಆಮಂತ್ರಣ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಜತೆ ದೆಹಲಿಯ ವಿವಿಧ ವರ್ಗದ 50 ಜನಸಾಮಾನ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಶಾಲೆಗಳ ಪ್ಯೂನ್​ಗಳು, ಆಟೋ ಚಾಲಕರು, ಬಸ್ ನಿರ್ವಾಹಕರು, ಶಾಲಾ ಶಿಕ್ಷಕರು ಸೇರಿ 50 ಜನರಿಗೆ ಕೇಜ್ರಿವಾಲ್ ಜತೆ ವೇದಿಕೆಯಲ್ಲಿ ಸ್ಥಾನ ನೀಡಲಾಗುತ್ತದೆ. ಪ್ರಮಾಣವಚನ ಕಾರ್ಯಕ್ರಮ ಮುಗಿಯುತ್ತಲೇ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಲು ತಿರ್ಮಾನಿಸಲಾಗಿದೆ. ಈ ವೇಳೆ ದೇಶಾದ್ಯಂತ ಆಪ್ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ರ್ಚಚಿಸಲಾಗುತ್ತದೆ ಎಂದು ಆಪ್ ನಾಯಕ ಗೋಪಾಲ್ ರಾಯ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net