ದೆಹಲಿ ವಿಧಾನಸಭೆ ವಿಸರ್ಜಿಸಿ ಪುನಃ ಜನಾದೇಶ ಪಡೆಯಲು ಕೇಜ್ರಿವಾಲ್​ ಚಿಂತನೆ

Arvind Kejriwal
Published on

ನವದೆಹಲಿ: ಮುಂದಿನ ಎರಡು ದಿನದೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜೈಲು ಪಅಲಾಗಿದ್ದ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ಸೆಪ್ಟೆಂಬರ್​ 13ರಂದು ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಬಂದ ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿದ ಕೇಜ್ರಿವಾಲ್​ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಇನ್ಮುಂದೆ ನಾನು ಸಿಎಂ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಪ್ರಾಮಾಣಿಕನೆಂದು ಜನರು ಹೇಳುವವರೆಗೂ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದಿಲ್ಲ. ಇನ್ನೆರಡು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ. ಜನಾದೇಶದೊಂದಿಗೆ ವಾಪಸ್​ ಬರುತ್ತೇನೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net