

ಶಿವಮೊಗ್ಗ: ಪಾಕಿಸ್ತಾನದಲ್ಲಿನ ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ ಬೆಂಬಲಿಸಿ ಪ್ರಿಯದರ್ಶಿನಿ ಎಜುಕೇಷನ್ ಸಂಸ್ಥೆಯ ಆರ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳು ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಿಂದ ಶಿವಪ್ಪನಾಯಕ ವೃತ್ತದವರೆಗೆ ಭಾರತ ಸಿಂಧೂರ ನಡೆ ರ‌್ಯಾಲಿ ನಡೆಸಿದರು.
ಭಾರತದ ಸಾರ್ವಭೌಮತೆ ಮತ್ತು ಐಕ್ಯತೆಯನ್ನು ಬುಡಮೇಲು ಮಾಡಲು ಯತ್ನಿಸುತ್ತಿರುವ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ ಬೆಂಬಲಿಸಿ ಮತ್ತು ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನ್ಯದ ಪರಾಕ್ರಮ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಎನ್.ರಮೇಶ್, ಪ್ರಮುಖರಾದ ಮುರಳಿಕೃಷ್ಣ, ನಿರ್ಮಲಾ, ಚಂದ್ರಶೇಖರ್, ಮೋನಿಷಾ ಹಾಗೂ ನೂರಾರು ವಿದ್ಯಾರ್ಥಿಗಳು ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದರು.