ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಶೇ.100 ಸಾಧನೆ

D S Arun
Published on

ಬೆಂಗಳೂರು:

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ 2022-23ನೇ ಸಾಲಿನಲ್ಲಿ ಶೇ. 100ರಷ್ಟು ಪ್ರಗತಿಯನ್ನು ಸಾಧಿಸಿದೆ.

ನಿಗಮಕ್ಕೆ ಬಿಡುಗಡೆಯಾದ 15ಕೋಟಿ ರೂ ಅನುದಾನದಲ್ಲಿ ಆಧಾರ್ ಆಧಾರಿತ ಪಾವತಿಯ (ಆಃಖಿ-ಆಜಿಡಿಛಿಛಿಣ ಚಿಛಿಟಿಛಿಜಿಜಿಛಿಜಿಚಿಡಿಥಿ ಣಡಿಚಿಟಿಜಿಛಿಡಿ) ಮೂಲಕ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ 838 ಫಲಾನುಭವಿಗಳಿಗೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ 46 ವಿದ್ಯಾರ್ಥಿಗಳಿಗೆ ಸಾಲ/ಸಹಾಯಧನವನ್ನು ಬಿಡುಗಡೆ ಮಾಡಲಾಗಿದೆ.

ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಶೇ.100ರಷ್ಟು ಪ್ರಗತಿ ಸಾಧಿಸಿರುವುದು ಹೆಮ್ಮೆಯ ವಿಷಯ ಎಂದಿದ್ದಾರೆ.

ನನ್ನ ಅವಧಿಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಗಣಕೀಕರಣಗೊಳಿಸಲಾಗಿದೆ. ಇದರಿಂದ ಸಕಾಲದಲ್ಲಿ ಎಲ್ಲಾ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಸಾಲ/ಸಹಾಯಧನ ಮಂಜೂರು ಮಾಡಲು ಸಾಧ್ಯವಾಗಿರುವುದು ಸಂತಸದ ವಿಷಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಡಿ.ಬಿ.ಟಿ ಕಡ್ಡಾಯವಾಗಿರುವುದರಿಂದ ಮುಂದಿನ ದಿನಗಳಲ್ಲೂ ಸಹ ಎಲ್ಲಾ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರಬೇಕು ಹಾಗೂ ಖಾತೆಗಳನ್ನು ಚಾಲ್ತಿಯಲ್ಲಿಟ್ಟು ಕೊಂಡಿರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಸ್ತುತ ನಿಗಮಕ್ಕೆ 3.50 ಕೋಟಿ ರೂ ಮರುಪಾವತಿ ಮೊತ್ತ ಸ್ವೀಕೃತಿಯಾಗಿದ್ದು, ಎಲ್ಲಾ ಫಲಾನುಭವಿಗಳಿಗೆ, ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಿದ ಎಲ್ಲರಿಗೂ ಅರುಣ್ ಧನ್ಯವಾದ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net