

ಭೂಪಾಲ್: ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಕರೊನಾವೈರಸ್ ಸೋಂಕನ್ನು ಹತ್ತಿಕ್ಕಲು ಮೂರು ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರು ಇಂದು ಈ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಲಾಕ್ಡೌನ್ ಇರಲಿದ್ದು, ವಿಶೇಷವೆಂದರೆ ನಗರ ಪ್ರದೇಶಗಳಿಗೆ ಮಾತ್ರ ಇದು ಅನ್ವಯವಾಗಲಿದೆ.
ಮಧ್ಯಪ್ರದೇಶದ ಎಲ್ಲ ಒಂದು ಮತ್ತು ಎರಡನೇ ಹಂತದ ನಗರಗಳಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಇರಲಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ.
ಬುಧವಾರ ಅಂತ್ಯಕ್ಕೆ ಮಧ್ಯಪ್ರದೇಶದಲ್ಲಿ 4,043 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. 13 ಜನ ಮೃತಪಟ್ಟಿದ್ದಾರೆ. ಒಟ್ಟು ಇದುವರೆಗೆ ಅಲ್ಲಿ 318,014 ಜನರಿಗೆ ಸೋಂಕು ತಗುಲಿತ್ತು. 26,059 ಸಕ್ರಿಯ ಪ್ರಕರಣಗಳು ವರದಿಯಾಗಿವೆ.