ಸೇವೆಯಿಂದ ಆಶಾ ಮೇಲ್ವಿಚಾರಕರ ಬಿಡುಗಡೆ

Asha
Published on

ಬೆಂಗಳೂರು: ರಾಜ್ಯದಲ್ಲಿ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ 195 ಆಶಾ ಮೇಲ್ವಿಚಾರಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಅರ್ಹರಿದ್ದಲ್ಲಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಕ್ಕೆ ಪರಿಗಣಿಸಬಹುದು ಎಂದು ಸರ್ಕಾರ ತಿಳಿಸಿದೆ.

2007-08ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಆಶಾ ಮೇಲ್ವಿಚಾರಕನ್ನು ನೇಮಕ ಮಾಡಿಕೊಳ್ಳಲಾಗಿತ್ತು. ತರಬೇತಿ ಜತೆಗೆ ಮೇಲ್ವಿಚಾರಣೆ, ಆಶಾ ನಿಧಿ ಪೋರ್ಟಲ್ ನಿರ್ವಹಣೆ, ಪ್ರೋತ್ಸಾಹಧನ ಪಾವತಿ ನಿರ್ವಹಣೆ ಮಾಡುತ್ತಿದ್ದರು.

ಈ ಕೆಲಸಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ನಿರ್ವಹಿಸಬಹುದಾಗಿದೆ. ಆದರಿಂದ ಆಶಾ ಮೇಲ್ವಿಚಾರಕರ ಹುದ್ದೆ ಅಗತ್ಯವಿಲ್ಲ ಎಂದು ಸರ್ಕಾರ ನಿರ್ಧರಿಸಿದ್ದು, ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಇವರ ಕೆಲಸವನ್ನು ಮಹಿಳಾ ಆರೋಗ್ಯ ಸಂದರ್ಶಕರು, ಆರೋಗ್ಯ ನಿರೀಕ್ಷಣಾ ಅಧಿಕಾರಿ, ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿಗಳು ನಿರ್ವಹಿಸುವಂತೆ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net