ರಾಜಸ್ಥಾನ ಮುಖ್ಯಮಂತ್ರಿ ಅಶೊಕ್​ ಗೆಹ್ಲೋಟ್​ಗೆ ಕರೊನಾ ದೃಢ

ashok gehlot
ಅಶೋಕ್ ಗೆಹ್ಲೋಟ್
Published on

ಜೈಪುರ: ದೇಶಾದ್ಯಂತ ಕರೊನಾ ಹಾವಳಿ ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯಗಳ ಅನೇಕ ನಾಯಕರಿಗೂ ಕರೊನಾ ದೃಢವಾಗಲಾರಂಭಿಸಿದೆ. ಇದೀಗ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ಅವರಲ್ಲೂ ಕರೊನಾ ಸೋಂಕು ಕಾಣಿಸಿಕೊಂಡಿದೆ.

ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ನನಗೆ ಇಂದು ಕರೊನಾ ಸಕಾರಾತ್ಮಕ ವರದಿ ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ನಾನು ಆರೋಗ್ಯವಾಗಿದ್ದೇನೆ. ಐಸೋಲೇಶನ್​ ಅಲ್ಲಿದ್ದುಕೊಂಡು ಕೆಲಸ ಮುಂದುವರಿಸುತ್ತೇನೆ" ಎಂದು ತಿಳಿಸಿದ್ದಾರೆ.

ಅಶೋಕ್​ ಗೆಹ್ಲೋಟ್​ ಅವರ ಪತ್ನಿಗೆ ಇತ್ತೀಚೆಗೆ ಕರೊನಾ ಸೋಂಕು ದೃಢವಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರ ಬೆನ್ನಲ್ಲೇ ಅಶೋಕ್​ ಅವರಿಗೂ ಸೋಂಕು ಕಾಣಿಸಿಕೊಂಡಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net