ರಾಜಸ್ಥಾನದಲ್ಲಿ ಕಾಂಗ್ರೆಸ್​ ಆಡಳಿತ ನಡೆಸಿದ್ದಕ್ಕಿಂತ ಕಿತ್ತಾಡಿಕೊಂಡಿದ್ದೆ ಜಾಸ್ತಿ: ಪ್ರಧಾನಿ ನರೇಂದ್ರ ಮೋದಿ

Narendra Modi
Published on

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್​ ಸರ್ಕಾರ ಆಡಳಿರ ನಡೆಸಿದ್ದಕ್ಕಿಂತ ಆಂತರಿಕವಾಗಿ ಕಚ್ಚಾಡಿಕೊಂಡಿದ್ಎ ಜಾಸ್ತಿ. ಅದ್ದರಿಂದ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಈ ವಿಚಾರದಲ್ಲಿ ರಾಜಸ್ಥಾನ ದೇಶದಲ್ಲೇ ನಂಬರ್​ 1 ಸ್ಥಾನ ಪಡೆದಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವರ್ಷಾಂತ್ಯದಲ್ಲಿ ವಿಧಾನಸಬೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದ ಜನರನ್ನು ವಂಚಿಸಿ ಕಾಂಗ್ರೆಸ್​ ಇಲ್ಲಿ ಸರ್ಕಾರ ರಚಿಸಿತ್ತು. ಆದರೆ, ಆಡಳಿತ ನಡೆಸುವ ವಿಚಾರದಲ್ಲಿ ಕಾಂಗ್ರೆಸ್​ ಸಂಪೂರ್ಣವಾಗಿ ವಿಫಲವಾಗಿದ್ದು, ಅಶೋಕ್​ ಗೆಹ್ಲೋಟ್​ ತಮ್ಮ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಹೋರಾಡಿದ್ದು ಬಿಟ್ಟರೆ ಬೇರೇನೂ ಮಾಡಲಿಲ್ಲ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್​ ಸರ್ಕಾರ ರಾಜಸ್ಥಾನವನ್ನು ಲೂಟಿ ಮಾಡಿ ಹಾಳುಗೆಡವಿದೆ. ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾಂಗ್ರೆಸ್​ ತನ್ನ ಆಡಳಿತದಲ್ಲಿ ಇದನ್ನು ಒಂದು ಸಂಪ್ರದಾಯವಾಗಿ ಮಾಡಿದೆ.

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರದ ಪತನಕ್ಕೆ ದಿನಗಣನೆ ಆರಂಭವಾಗಿದ್ದು, ಜನರು ಬಿಜೆಪಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಾರ್ವಜನಿಕವಾಗಿ ತಮ್ಮ ಸೋಲನ್ನು ಒಪ್ಪಿಕೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್​ ಸರ್ಕಾರದ ಜನಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಇದು ಮೋದಿ ನಿಮ್ಮಗೆ ಕೊಡುತ್ತಿರುವ ಗ್ಯಾರಂಟಿ ಎಂದು ಕಾಂಗ್ರೆಸ್​ಗೆ ಟಾಂಗ್​ ಕೊಟ್ಟಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪೇಪರ್​ ಲೀಕ್​ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು ಮೋದಿ ರಾಜಸ್ಥಾನದ ಯುವಕರಿಗೆ ನೀಡುತ್ತಿರುವ ಗ್ಯಾರಂಟಿ ಎಂದು ರಾಜಸ್ಥಾನದ ಚಿತ್ತೋರ್​ಘರ್​ನಲ್ಲಿ ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net