ಏಷ್ಯನ್ ಡೆವಲಪ್​ಮೆಂಟ್ ಬ್ಯಾಂಕ್ ಉಪಾಧ್ಯಕ್ಷರಾಗಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ನೇಮಕ

Lavasa
Published on

ಮುಂಬೈ: ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ನೇಮಕಗೊಳ್ಳಲು ಕೆಲವೇ ತಿಂಗಳುಗಳ ಮೊದಲು ಚುನಾವಣಾ ಆಯುಕ್ತ (ಇಸಿ) ಮತ್ತು ಮಾಜಿ ಹಣಕಾಸು ಕಾರ್ಯದರ್ಶಿ ಅಶೋಕ್ ಲವಾಸಾ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನ ಉಪಾಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ.

ಲವಾಸಾ ಎಡಿಬಿ ಖಾಸಗಿ ವಲಯ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ವನ್ನು ನಿರ್ವಹಿಸಲಿದ್ದಾರೆ. ದಿವಾಕರ್ ಗುಪ್ತಾ ಅವರ ಅವಧಿ ಆಗಸ್ಟ್ 31 ರಂದು ಕೊನೆಗೊಳ್ಳಲಿದ್ದು, ಅವರ ನಂತರ ಲವಾಸಾ ಅಧಿಕಾರ ಸ್ವೀಕರಿಸಲಿದ್ದಾರೆ.

ಹರಿಯಾಣ ಕೇಡರ್‌ನ 1980 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಲವಾಸಾ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಸಾರ್ವಜನಿಕ ಮತ್ತು ಖಾಸಗಿ -ಸಾರ್ವಜನಿಕ- ಸಹಭಾಗಿತ್ವ ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ವ್ಯಾಪಕ ಅನುಭವ ಹೊಂದಿದ್ದು, ಸಾರ್ವಜನಿಕ ನೀತಿ ಮತ್ತು ಖಾಸಗಿ ವಲಯದ ಪಾತ್ರದ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದಾರೆ. ಅವರು ಹಣಕಾಸು ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಏಷ್ಯನ್ ಡೆವಪಲ್​​ಮೆಂಟ್ ಬ್ಯಾಂಕ್​​ನ್ನು 1966 ರಲ್ಲಿ ಸ್ಥಾಪಿಸಲಾಯಿತು, ಫಿಲಿಪ್ಪೀನ್ಸ್​​ನ ಮಂಡಲುಯೊಂಗ್​​ನಲ್ಲಿ ಇದರ ಪ್ರಧಾನ ಕಚೇರಿ ಇದೆ. ಮಸಾತ್​​ಸುಗು ಅಸಾಕಾವಾ ಅಧ್ಯಕ್ಷರಾಗಿದ್ದಾರೆ. ಸದಸ್ಯ ರಾಷ್ಟ್ರಗಳು 68. ‘

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net