ವಿಧಾನಸೌಧದಲ್ಲಿ ಚಟುವಟಿಕೆ ಆರಂಭಿಸಿದ ಅಶೋಕ; ಬಿಎಸ್‌ವೈ, ಬೊಮ್ಮಾಯಿ, ಆರಗ ಹಾರೈಕೆ

r ashoka
Published on

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ವಿಧಾನಸೌಧದಲ್ಲಿ ತಮ್ಮ ಕಚೇರಿ ಪೂಜೆ ನೆರವೇರಿಸಿ ಅಧಿಕೃತವಾಗಿ ತಮ್ಮ ಚುಟುವಟಿಕೆ ಆರಂಭಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿ ಬಿಜೆಪಿಯ ಹಲವು ಶಾಸಕರು ಹಾಜರಿದ್ದು ಶುಭ ಹಾರೈಸಿದರು.

ನಂತರ ಸುದ್ದಿಗೋಷ್ಠಿ ನಡೆಸಿದ ಅಶೋಕ್, ನಮ್ಮ ಪ್ರಧಾನಿಗಳು, ಪಕ್ಷದ ಅಧ್ಯಕ್ಷ ನಡ್ಡಾ, ಅಮಿತ್ ಶಾ, ಬಿ.ಎಲ್. ಸಂತೋಷ್ ಅವರು ಪಕ್ಷದ ನಾಯಕರ ಜತೆ ಚರ್ಚೆ ಮಾಡಿ ನನ್ನನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಕೊಟ್ಟ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತೇನೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಲ್ಲಿ ಏನೂ ಆಗಿಲ್ಲ. ವರ್ಗಾವಣೆಯಲ್ಲಿ ಸರ್ಕಾರ ಮುಳುಗಿದೆ. ಅನೇಕ ಕಪ್ಪು ಚುಕ್ಕೆಗಳು ಕಾಣಿಸುತ್ತಿವೆ. ಸರ್ಕಾರದ ಕಿವಿ ಹಿಂಡುವ ಕೆಲಸಗಳನ್ನ ಸದನದಲ್ಲಿ ಮಾಡುತ್ತೇವೆ, ಅದಕ್ಕೂ ಬಗ್ಗದೇ ಹೋದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net