

ಬೆಂಗಳೂರು: ಸಚಿವರೊಬ್ಬರು ‘ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾದ ನಂತರ ಇದೀಗ ಸ್ಪಷ್ಟನೆ ನೀಡಿದ್ದಾರೆ. ಇ1ದಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವಥ್ ನಾರಾಯಣ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ದೂರು ನೀಡಿದ್ದಾರೆ.
ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಸಚಿವ ಅಶ್ವಥ್ ನಾರಾಯಣ, ಟಿಪ್ಪು ವಿಚಾರ ಬಂದಾಗ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಟಿಪ್ಪು ರೀತಿಯಲ್ಲೇ ಕೊಲ್ಲಬೇಕು ಎಂದಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಅಶ್ವಥ್ ನಾರಾಯಣ ‘ ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ. ಆ ಸಂದರ್ಭ, ಟಿಪ್ಪು ಹೆಸರು ಉಲ್ಲೇಖ ಮಾಡಿದೆ. ಟಿಪ್ಪು ಜಯಂತಿ ಯನ್ನ ಕಾಂಗ್ರೆಸ್ ಮಾಡುತ್ತಿದೆ. ಅದನ್ನ ಖಂಡಿಸುವಂತೆ ಆಗಬೇಕು. ಜನರಿಗೆ ಇದನ್ನು ಸ್ಪಷ್ಟವಾಗಿ ಹೇಳಿದೆ. ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆ. ಯುದ್ಧದ ಕಾಲದಲ್ಲಿ ಇಲ್ಲ.
ಹೀಗಾಗಿ ನಾವಯ ಪ್ರಜಾಪ್ರಭುತ್ವ ದಲ್ಲಿ ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿಯಲ್ಲಿ ಆ ಮಾತನ್ನು ಹೇಳಿಲ್ಲ. ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ.
ಓಲೈಕೆ ಮಾಡುವ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಬೇಕು ಅನ್ನುವುದಷ್ಟೇ ನನ್ನ ಮಾತಿನ ಉದ್ದೇಶ. ಅವರಿಗೆ ವೈಯಕ್ತಿಕ ವಾಗಿ ನೋವಾಗಿದ್ದೆರೆ ವಿಷಾದ ವ್ಯಕ್ತಪಡಿಸುತ್ತೇನೆ. ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರ ಹಂತಕ ಎಂದು ಕರೆಯುತ್ತಾ ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವಯಕ್ತಿಕವಾಗಿ ವಿರೋಧ ಮಾಡಿಲ್ಲ. ಮತ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ’ ಎಂದು ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದರು.