ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘಣ್ಣ

DKS
Published on

ಬೆಂಗಳೂರು: ನಟ, ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಬೆಳಗ್ಗೆ ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

ಡಾ.ರಾಜಕುಮಾರ್ ಕುಟುಂಬ ಪಕ್ಷದ ಹೊರತಾಗಿ ಬಹುತೇಕ ರಾಜಕೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಶಿವರಾಜಕುಮಾರ್ ಕಾಂಗ್ರೆಸ್ ಪರ ಪ್ರಚಾರವನ್ನೂ ಕೈಗೊಂಡಿದ್ದರು. ಇದೀಗ ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್ ಭೇಟಿ ಮಾಡಿ ಅಭಿನಂದಿಸಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆಶಿ

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವಿಕೇಂಡ್​ ವಿತ್​ ರಮೇಶ್​​ ಕಾರ್ಯಕ್ರಮವು ಜನಮನ್ನಣೆಯನ್ನು ಪಡೆದುಕೊಂಡಿದೆ. ಈ ವಾರ ವೀಕೆಂಡ್​ ವಿತ್ ರಮೇಶ್​ ಕಾರ್ಯಕ್ರಮದಲ್ಲಿ ರಾಜ್ಯದ ಡಿಸಿಎಂ ಡಿ.ಕೆ ಶಿವಕುಮಾರ್​ ಸಾಧಕರ ಕುರ್ಚಿ ಏರುತ್ತಿದ್ದಾರೆ. ಡಿಸಿಎಂ ಜತೆಗೆ ಅವರ ಪತ್ನಿ ಉಷಾ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಕೆಶಿ ಕುಟುಂಬಸ್ಥರು, ಆಪ್ತರು ಕಾಣಿಸಿಕೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net