ಡಾ.ರಾಜ್‌ಕುಮಾರ್ 95ನೇ ಹುಟ್ಟುಹಬ್ಬದಂದು ಅಗರಬತ್ತಿ ಉದ್ಯಮಕ್ಕೆ ಕೈ ಹಾಕಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Ashwini puntih rajkumar
Published on

ಬೆಂಗಳೂರು: ನಟ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ  ಬರೆದುಕೊಂಡಿದ್ದಾರೆ.

ಅಪ್ಪಾಜಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಎಂದು ಅಣ್ಣಾವ್ರರನ್ನು ಅಶ್ವಿನಿ ಸ್ಮರಿಸಿದ್ದಾರೆ. ಇಂದು ಅಪ್ಪಾಜಿಯವರ 95ನೇ ಜನ್ಮದಿನಾಚರಣೆಯ ಅಂಗವಾಗಿ ಹಾಗೂ ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಶುಭಸುದ್ದಿ ತಿಳಿಸಿದ್ದಾರೆ. ಅಪ್ಪು ಅವರ ‘ಗಂಧದಗುಡಿ ಅಗರಬತ್ತಿ’ಯ ಶುಭಾರಂಭದೊಂದಿಗೆ ಸ್ಮರಿಸೋಣ ಎಂದು ಅಶ್ವಿನಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿ ವರ್ಷದಂತೆ ಈ ಸಲವೂ ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net