ಹೃದಯಾಘಾತದಿಂದ ಎಎಸ್‌ಐ ಸಾವು

a s i
Published on

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ಶಿವಶಂಕರ ಚಾರಿ(೪೫) ಮೃತಪಟ್ಟವರು.
ಶಿವಶಂಕರ ಅವರು ಗುರುವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್‌ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ೧೯೯೯ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದ ಶಿವಶಂಕರ ಚಾರಿ ಅವರು, ಕಳೆದ ಒಂದೂವರೆ ವಷರ್ದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರ ಸಾವಿಗೆ ಕುಟುಂಬದವರು, ಸ್ನೇಹಿತರು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net