

ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಧು ಕೋಕಿಲ ಅವರು, ನಾನೊಬ್ಬ ಕಲಾವಿದನಾಗಿರುವರಿಂದ ಎಲ್ಲ ಸಮುದಾಯಗಳ ಜನ ನನ್ನನ್ನು ಇಷ್ಟಪಡುತ್ತಾರೆ. ನಾನು ಯಾವತ್ತೂ ಜನರನ್ನು ತಾರತಮ್ಮ ಭಾವದಿಂದ ನೋಡಿದವನಲ್ಲ, ಎಲ್ಲ ವರ್ಗದವರನ್ನು ಸಮಾನವಾಗಿ ನೋಡುತ್ತೇನೆ ಎಂದರು.
ಬೆಂಗಳೂರು ಸೆಂಟ್ರಲ್ ನಲ್ಲಿ ಕ್ರಿಶ್ವಿಯನ್ ಸಮುದಾಯವಿದೆ. ಎಲ್ಲೂ ಕ್ರಿಶ್ವಿಯನ್ನರಿಗೆ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ನನಗೆ ಟಿಕೆಟ್ ಕೊಡಬೇಕು. ಚಾಮರಾಜಪೇಟೆ ಮತ್ತು ಶಿವಾಜಿನಗರದಲ್ಲಿರುವ ಕ್ರೈಸ್ತರೆಲ್ಲ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಟಿಕೆಟ್ ಸಿಕ್ಕರೆ ಖಂಡಿತ ಗೆಲ್ತೀನಿ ಅನ್ನುವ ಕೋಕಿಲ, ಟಿಕೆಟ್ ಆಕಾಂಕ್ಷಿಯಾಗಿರುವುದು ನಿಜವಾದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.
ವಿಧಾನಸೌಧದ ಮುಂದೆ ಮಾತನಾಡುತ್ತಿದ್ದೇನೆ ಎಂದರೆ ಅದಕ್ಕೆ ಕಾರಣ ನಮ್ಮ ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಅಂದರೆ ಅದು ಕಾಂಗ್ರೆಸ್. ನಾನು ಎಲ್ಲ ಎಲೆಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನನ್ನು ಫಿಲಂ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಸಾಧುಕೋಕಿಲ ಹೇಳಿದ್ದಾರೆ.
ಒಂದೊಂದೇ ಮೆಟ್ಟಿಲು ಹತ್ತಬೇಕಿದೆ. ಎಲ್ಲರ ಆಶೀರ್ವಾದ ನಮಗೆ ಬೇಕಿದೆ. ಕರ್ನಾಟಕ ಫಿಲಂ ಅಕಾಡೆಮಿಯಲ್ಲಿ ಹಲವು ಕೆಲಸ ಇವೆ. ಆ ಎಲ್ಲಾ ಕೆಲಸವನ್ನ ನಾನುಮಾಡುತ್ತೇನೆ ಎಂದು ಹಾಸ್ಯ ನಟ ಸಾಧುಕೋಕಿಲ ಹೇಳಿಕೆ ಕೊಟ್ಟಿದ್ದಾರೆ.
ಸ್ಯಾಂಡಲ್‌ವುಡ್‌ನ ಸಂಗೀತ ನಿರ್ದೇಶಕ ಸಾಧು ಕೋಕಿಲಾ ಇದೀಗ ಚಲನ ಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.