ದಾಖಲೆ ಮತದಾನ ಮಾಡಲು ಅಸ್ಸಾಂ, ಪಶ್ಚಿಮ ಬಂಗಾಳ ಜನತೆಗೆ ಪ್ರಧಾನಿ ಮೋದಿ ಕರೆ

PM modi
Published on

ಕೋಲ್ಕತ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗಳಲ್ಲಿ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಈ ಹಿನ್ನೆಯಲ್ಲಿ ಪ್ರಧಾನಿ ಮೋದಿ ಉಭಯ ರಾಜ್ಯಗಳ ಪ್ರಜೆಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಒಂದು ಅಸ್ಸಾಂನ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಮತದಾನ ಅರ್ಹತೆ ಹೊಂದಿರುವವರು ದಾಖಲೆಯ ಮತದಾನ ಮಾಡಿ. ಅದರಲ್ಲೂ ವಿಶೇಷವಾಗಿ ನನ್ನ ಯುವ ಸಮೂಹಕ್ಕೆ ಮತದಾನ ಮಾಡಲು ಕೋರುತ್ತೇನೆ ಎಂದಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ಎಲ್ಲರೂ ತಮ್ಮ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿ ದಾಖಲೆ ಸಂಖ್ಯೆಯಲ್ಲಿ ಮತವನ್ನು ಚಲಾಯಿಸಿ ಎಂದು ಕೋರಿದ್ದಾರೆ.

ಮೊದಲ ಹಂತದಲ್ಲಿ ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳಿಗೆ, ಅಸ್ಸಾಂನ 126 ಕ್ಷೇತ್ರಗಳ ಪೈಕಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಸಿಎಂ ಸರ್ಬಾನಂದ ಸೊನೊವಾಲ್ ಅವರು ಸೇರಿದಂತೆ ಹಲವರ ಭವಿಷ್ಯ ನಿರ್ಧಾರವಾಗಲಿದೆ. ಎರಡೂ ರಾಜ್ಯಗಳಲ್ಲಿ ಮೊದಲ ಹಂತದಲ್ಲಿ ಒಟ್ಟು 1.54 ಕೋಟಿ ಮತದಾರರು 10,288 ಮತಗಟ್ಟೆಗಳಲ್ಲಿ ಮತಚಲಾವಣೆ ಮಾಡಲಿದ್ದಾರೆ.

ಚುನಾವಣಾ ಭದ್ರತಾ ಕಾರ್ಯಗಳಿಗೆ 684 ಕಂಪನಿ ಕೇಂದ್ರೀಯ ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಪ್ರತಿ ಕಂಪನಿಯಲ್ಲಿ 100 ಸಿಬ್ಬಂದಿ ಇದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net