PUC ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡಲಿದೆ ಅಸ್ಸಾಂ ಸರ್ಕಾರ

assamgovt
Published on

ಅಸ್ಸಾಂ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಸ್ಸಾಂ ರಾಜ್ಯ ಸರ್ಕಾರವು ಉಚಿತ ಸ್ಕೂಟರ್ ನೀಡಲು ನಿರ್ಧರಿಸಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಶರ್ಮಾ ಅವರು ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ ಮೆರಿಟ್ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಅಸ್ಸಾಂನಲ್ಲಿ 9ನೇ ತರಗತಿಯ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕೂಟರ್; ಅಸ್ಸಾಂ ಸಿಎಂ ಘೋಷಣ

12ನೇ ತರಗತಿ ಪರೀಕ್ಷೆಯಲ್ಲಿ ಶೇ.60 ಅಂಕ ಪಡೆದ ಬಾಲಕಿಯರು ಮತ್ತು ಶೇ.75 ಅಂಕ ಪಡೆದ ಬಾಲಕರಿಗೆ ಉಚಿತ ಸ್ಕೂಟರ್ ವಿತರಿಸಲಾಗುವುದು ಎಂದು ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಹೇಳಿದ್ದಾರೆ. 12ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರಿಗೆ ಸಚಿವ ಸಂಪುಟವು ಇದಕ್ಕಾಗಿ ರೂ.167 ಕೋಟಿಗಳನ್ನು ನಿಗದಿಪಡಿಸಿದೆ ಎಂದು ಪ್ರಸ್ತಾಪಿಸಿದರು.  ಇದಲ್ಲದೇ ಸೆಪ್ಟೆಂಬರ್‌ನಿಂದ ತಿಂಗಳಿಗೆ 1250 ರೂಪಾಯಿಯಂತೆ 7 ಲಕ್ಷ ಜನರಿಗೆ ಆರ್ಥಿಕ ನೆರವನ್ನು ಅಸ್ಸಾಂ ಸರ್ಕಾರ ಒದಗಿಸಲಿದೆ.

ಅಸ್ಸಾಂ ರಾಜ್ಯದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸಲು ಕ್ರಮಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಮನವಿ ಮಾಡಲಾಗಿದೆ. ಅಸ್ಸಾಂ ರಾಜ್ಯದ ಕೃಷಿ ವಿಶ್ವವಿದ್ಯಾಲಯದಲ್ಲಿ ಶೇ.27ರಷ್ಟು ಸೀಟುಗಳನ್ನು ಒಬಿಸಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಅಸ್ಸಾಂನಲ್ಲಿ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಹಿಮಂತ ಬಿಸ್ವಶರ್ಮಾ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net