ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳು ವಶ; ಮೂವರು ಅರೆಸ್ಟ್​​

Assam Police seize cough syrup
Published on

ಅಸ್ಸಾಂ: ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳನ್ನು ರಾಜ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಜಪ್ತಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ರಹಸ್ಯ ಮಾಹಿತಿಯ ಆಧಾರದ ಮೇಲೆ ಸಿಆರ್‌ಪಿಎಫ್‌ನೊಂದಿಗೆ ಗೋಲ್‌ಪಾರಾ ಜಿಲ್ಲಾ ಪೊಲೀಸರ ತಂಡವು ವಿವಿಧ ಭಾಗಗಳಲ್ಲಿ ತಪಾಸಣೆಯನ್ನು ಸ್ಥಾಪಿಸಿತು.  ಪೈಕನ್ ಪ್ರದೇಶದಲ್ಲಿ ಎರಡು ವಾಹನಗಳನ್ನು ತಡೆದು ಶೋಧ ಮಾಡಿದ್ದಾರೆ.

'ಖಚಿತ ಮಾಹಿತಿ ಆಧಾರದ ಮೇಲೆ ಪೈಕಾನ್ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5,075 ಕೆಮ್ಮಿನ ಸಿರಪ್ ಬಾಟಲಿಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಕೆಮ್ಮಿನ ಸಿರಪ್ ಸುಮಾರು 25 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಸ್ಸಾಂ ಪೊಲೀಸರ ಪ್ರಕಾರ, ಕೆಮ್ಮಿನ ಸಿರಪ್ ಬಾಟಲಿಗಳನ್ನು ತುಂಬಿದ್ದ ಪಿಕಪ್ ವ್ಯಾನ್‌ ಮೇಘಾಲಯದ ತುರಾ ಕಡೆಗೆ ಹೋಗುತ್ತಿತ್ತು. ಘಟನೆ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net