ಆರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಯೋಧ

army
Published on

ಇಂಫಾಲ್: ಅಸ್ಸಾಂ ರೈಫಲ್ಸ್‌ನ ಸೈನಿಕನೊಬ್ಬ ತನ್ನ ಆರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಮಣಿಪುರದಲ್ಲಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗುಂಡೇಟಿಗೆ ಒಳಗಾದ ಯೋಧರನ್ನು ಚುರಾಚಂದ್‍ಪುರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ್ದು ಕಲಹ ಪೀಡಿತ ಮಣಿಪುರದ ಚುರಾಚಂದ್‍ಪುರ ಮೂಲದ ಯೋಧ ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮ್ಯಾನ್ಮಾರ್ ಗಡಿಯ ಬಳಿ ನಿಯೋಜಿಸಲಾದ ಅಸ್ಸಾಂ ಬೆಟಾಲಿಯನನ್​ನಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ದುರದೃಷ್ಟಕರ ಘಟನೆಯು ನಡೆಯುತ್ತಿರುವ ಸಂಘರ್ಷದೊಂದಿಗೆ ಪರಸ್ಪರ ಸಂಬಂಧ ಹೊಂದಿರಬಾರದು. ಗಾಯಗೊಂಡವರಲ್ಲಿ ಯಾರೂ ಮಣಿಪುರದವರಲ್ಲ ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

ಮಣಿಪುರದ ವಿವಿಧ ಸಮುದಾಯಗಳನ್ನು ಒಳಗೊಂಡಂತೆ ಎಲ್ಲಾ ಅಸ್ಸಾಂ ರೈಫಲ್ಸ್ ಬೆಟಾಲಿಯನ್‌ಗಳು ಮಿಶ್ರ ವರ್ಗ ಸಂಯೋಜನೆಯನ್ನು ಹೊಂದಿವೆ ಎಂದು ಪೊಲೀಸರು ಹೇಳಿದ್ದಾರೆ. ಮಣಿಪುರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಮಾಜದ ಧ್ರುವೀಕರಣದ ಹೊರತಾಗಿಯೂ ಎಲ್ಲಾ ಸಿಬ್ಬಂದಿ ಒಟ್ಟಿಗೆ ಉಳಿದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net