ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಹತ್ಯೆ

swmiji
ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ
Published on

ಕೋಲಾರ: ಎರಡು ಗುಂಪುಗಳ ನಡುವೆ ಆದ ಜಗಳ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ.

ಜಿಲ್ಲೆಯ ಮಾಲೂರು ತಾಲೂಕಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಕೆಲಸ ಮಾಡುತ್ತಿರುವವರ ಎರಡು ಗುಂಪುಗಳ ನಡುವೆ ಜಗಳವಾಗಿದೆ. ಇದರಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (76) ಹತ್ಯೆಯಾಗಿದ್ದಾರೆ.
ಶನಿವಾರ ಬಳಗ್ಗೆ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಅದೇ ಆಶ್ರಮದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಸಹಚರರು ಸ್ನಾನದ ಕೋಣೆಯಿಂದ ಹೊರಗೆಡೆ ಎಳೆದಾಡಿ ದೋಣ್ಣೆಗಳಿಂದ ಮರಣಾಂತಿಕ ಹಲ್ಲೆ ಮಾಡಿದ್ದಾರೆ.
ಇದನ್ನು ಗಮನಿಸಿದ ಆಶ್ರಮದಲ್ಲಿನ ಕೆಲವರು ಕೂಡಲೇ ಗಾಯಗೊಂಡಿದ್ದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆನಂದ ಮಾರ್ಗ ಆಶ್ರಮಕ್ಕೆ ಸೇರಿರುವ ಪಾಲಿಟೆಕ್ನಿಕ್​ ಕಾಲೇಜು ಸಂಬಂಧ ಎರಡು ಗುಂಪುಗಳ ನಡುವೆ 22 ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಜೂ.24ರಂದು ವಿಚಾರಣೆಯು ಇತ್ತು, ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ ಆಚಾರ್ಯ ಧರ್ಮ ಪ್ರಾಣಾನಂದ ಗುಂಪುಕಟ್ಟಿಕೊಂಡು ಅಗಾಗ ಗಲಾಟೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಆಚಾರ್ಯ ಧರ್ಮ ಪ್ರಾಣಾನಂದ ಮತ್ತು ಆರುಣ್​ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.ನಾರಾಯಣ ಹಾಗೂ ಮಾಲೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net