ವಿಧಾನಸಭೆ ಸ್ಪೀಕರ್​ ಯು.ಟಿ. ಖಾದರ ಪ್ರವಾಸ ಇಂದು

u-t-abdul-khadar
Published on

ರಾಣೆಬೆನ್ನೂರ: ವಿಧಾನಸಭೆ ಸ್ಪೀಕರ್​ ಯು.ಟಿ. ಖಾದರ ಆ. 15ರಂದು ನಗರಕ್ಕೆ ಆಗಮಿಸಿದ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮೃತ್ಯುಂಜಯ ನಗರದ ಶಾಸಕರ ಮಾದರಿ ಶಾಲೆಯಲ್ಲಿ ಸ್ವಾತಂತ್ರ$್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸುವರು. 7.30ಕ್ಕೆ ಆಂಗ್ಲ ಉರ್ದು ಹೈಸ್ಕೂಲ್​ ಮೈದಾನದಲ್ಲಿ ಸ್ವಾತಂತ್ರ$್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 8 ಗಂಟೆಗೆ ನಗರದ ಎಪಿಎಂಸಿ ಗಣೇಶ ದೇವಸ್ಥಾನದ ಬಳಿ ಯುದ್ಧ ಟ್ಯಾಂಕರ್​ ಮೆರವಣಿಗೆಗೆ ಚಾಲನೆ ನೀಡುವರು. ನಂತರ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿ, ಬೆಂಗಳೂರು ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net