

ಮಧ್ಯಪ್ರದೇಶ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಪೈಕಿ ಇದೀಗ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕುತೂಹಲದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಇದೀಗ ಚಾಲನೆ ಸಿಕ್ಕಾಗಿದೆ. ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದ್ದು, ಸದ್ಯದ ಎಣಿಕೆಯ ಪ್ರಕಾರ 100 ಕ್ಷೇತ್ರಗಳಲ್ಲಿ ಭರ್ಜರಿ ಓಟ ಸಾಗುತ್ತಿದೆ. ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಪಡೆದರೆ, ಛತ್ತೀಸ್ಗಢ ಭೂಪೇಶ್ ಬಗೇಲ್ ಮುನ್ನಡೆ, ಮಧ್ಯಪ್ರದೇಶ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದಿದೆ.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಹುಮತದಿಂದ ಗೆಲುವು ಸಾಧಿಸಲು ದಾಪುಗಾಲು ಇಟ್ಟಿರುವ ಕಾಂಗ್ರೆಸ್, ಕರ್ನಾಟದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಪಂಚ ರಾಜ್ಯಗಳಲ್ಲಿಯೂ ಘೋಷಿಸಿದ್ದು, ಇದು ಭಾರೀ ಭರವಸೆ ಮೂಡಿಸಲಿದೆಯಾ? ಈ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ಗೆ ವರದಾನ ಆಗಲಿದೆಯಾ? ಅಥವಾ ಲೆಕ್ಕಾಚಾರಗಳು ಬದಲಾಗಲಿದೆಯಾ? ಎಲ್ಲವೂ ಇನ್ನೇನು ಕೆಲವೇ ಗಂಟೆಗಳಲ್ಲಿ ಬಹಿರಂಗಗೊಳ್ಳಲಿದೆ.