ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ನೆರವು

klr usa
ಕೋಲಾರ ತಾಲೂಕಿನ ಅಂಕ ತಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಅಪ್ ಲೈ-ï್ಟ ಸ್ಕೂಲ್ ಐಎನ್‌ಎಸ್ ಶೈಕ್ಷಣಿಕ ಪರಿಕರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು.
Published on

ಕೋಲಾರ: ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ, ಶಾಲೆಗಳನ್ನು ಗುರುತಿಸಿ ಬಲವರ್ಧನೆಗೆ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಅಮೇರಿಕಾ ವೈದ್ಯ ಡಾ. ಜಗದೀಶ್ ಕುಮಾರ್ ಹೇಳಿದರು.

ತಾಲೂಕಿನ ಅಂಕ ತಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಅಪ್ ಲೈಫ್ಟ್ ಸ್ಕೂಲ್ ಐಎನ್‌ಎಸ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ಪರಿಕರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾನು ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಸರ್ಕಾರಿ ಶಾಲೆಯ ವಸ್ತು ಸ್ಥಿತಿಯನ್ನು ಅರಿತಿದ್ದೇನೆ ಎಂದರು.
ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ನಿವಾಸಿ ಆದ ನಾನು ಆಮೆರಿಕಾದಲ್ಲಿ ಉದ್ಯೋಗಸ್ಥನಾಗಿದ್ದು, ನೆಲಕ್ಕೆ ಕೊಡುಗೆ ನೀಡಬೇಕೆಂಬ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದೆನೆ ಎಂದು ಹೇಳಿದರು.
ಸಮಾಜದಲ್ಲಿನ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ನಮ್ಮ ಮೂಲ ಉದ್ದೇಶವಾಗಿದೆ, ಅದಕ್ಕೆ ತಕ್ಕಂತೆ ಸರ್ಕಾರ ಶಾಲೆಗಳಲ್ಲಿ ಕಲಿಕಾ ವಾತಾವರಣ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಕಲಿಕಾ ಸಮಾಗ್ರಿಗಳನ್ನು ಕಲ್ಪಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಮುಂದಿನ ವಷÀðದಿಂದ ಮತ್ತಷ್ಟು ಶಾಲೆಗಳಿಗೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ನಿಽ ಚಾರಿಟೇಬಲ್ ಟ್ರಾಸ್ಟ್ ಮೂಲಕ ಪ್ರಸಕ್ತ ಸಾಲಿನಲ್ಲಿ ಒಟ್ಟು 25 ಲಕ್ಷ ರೂ. ವೆಚ್ಚದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ. ಅಗ್ರಹಾರ, ಸೀಸಂದ್ರ, ಅಂಕತಟ್ಟಿ, ಊರುಕುಂಟೆ ಮಿಟ್ಟೂರು ಗ್ರಾಮಗಳನ್ನು ಆಯ್ಕೆ ಮಾಡಿಕಿಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿ ಗೌಡ, ರೇಷೆೆ್ಮ ಬೆಳೆಗಾರರ ಸಂಘದ ನಿರ್ದೇಶಕ ಭಾಸ್ಕರ್ ಬಾಬು, ಸುಗಟೂರು ಗ್ರಾಪಂ ಪಿಡಿಒ ರಮೇಶ್, ದಾನಿಗಳಾದ ಶುಭಾ, ನಿಧಿ ಗೌಡ, ಸೋನು ಗೌಡ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶ್ರೀರಾಮ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ, ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಬಾಬು, ವೆಂಕಟರಾಮ್, ಶಿಕ್ಷಕಿರಾದ ವರಲಕ್ಷ್ಮಿ, ಶೋಭಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net