ವಿಜಯವಾಣಿ ವರದಿ ಪರಿಣಾಮ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿ ಸಿದ್ಧ, ದಿನಾಂಕವೂ ಪ್ರಕಟ

kea
Published on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಮಾ.12ರಿಂದ 16ರವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ರೂಪಿಸಿದ್ದು, ಒಂದು ತಿಂಗಳು ಮೊದಲೇ ಪರೀಕ್ಷಾ ದಿನಾಂಕವನ್ನೂ ಪ್ರಕಟಿಸಿದೆ.

‘1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕ ಗೊಂದಲ’ ಶೀರ್ಷಿಕೆ ಅಡಿ ವಿಜಯವಾಣಿ ಭಾನುವಾರ ವಿಶೇಷ ವರದಿ ಪ್ರಕಟಿಸಿತ್ತು. ವೇಳಾಪಟ್ಟಿ ಪ್ರಕಟಿಸದೇ ಇರುವುದಕ್ಕೆ ಅಭ್ಯರ್ಥಿಗಳಿಂದ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಬೆಳಕು ಚೆಲ್ಲಿತ್ತು.
ಈ ಹಿಂದೆ ಪ್ರಕಟಿಸಿದ್ದ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸ್ವೀಕರಿಸಿ, ಅಂತಿಮ ವೇಳಾಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.12ರಿಂದ 16ರವರೆಗೆ ಪರೀಕ್ಷೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಫೆ.28ರ ನಂತರ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ http://kea.kar.nic.in ನೋಡಬಹುದು.

ಈ ಮೊದಲು ಫೆ.26ರಿಂದ 28ರವರೆಗೆ ವಿಶ್ವವಿದ್ಯಾಲಯ ಹಂತದಲ್ಲಿ ಪರೀಕ್ಷೆ ನಡೆಸಲು ವಿವಿಗಳಿಗೆ ಸೂಚನೆ ನೀಡಿತ್ತು. ಆತುರದಲ್ಲಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಅಭ್ಯರ್ಥಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಗುರುತಿಸಿ ಒಂದು ತಿಂಗಳು ಮುಂಚಿತವಾಗಿಯೇ ದಿನಾಂಕ ಪ್ರಕಟಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net