ನ್ಯಾಷನಲ್ ಹೌಸಿಂಗ್ ಬ್ಯಾಂಕ್​​ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್​​ ಹುದ್ದೆಗೆ ಅರ್ಹತೆ ಏನು?

Exam
Published on

ನವದೆಹಲಿ: ನ್ಯಾಷನಲ್ ಹೌಸಿಂಗ್ ಬ್ಯಾಂಕ್ (ಎನ್​​ಎಚ್​ಬಿ) , ಅಸಿಸ್ಟೆಂಟ್ ಮ್ಯಾನೇಜರ್ (ಜೆಎಮ್​ಜಿ ಸ್ಕೇಲ್ 1) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 16 ಹುದ್ದೆಗಳಿವೆ. ಶೇ 60 ಅಂಕಗಳೊಂದಿಗೆ ಪದವಿ ಅಥವಾ ಶೇ 55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇರುತ್ತದೆ.  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್​ಲೈನ್ ಪರೀಕ್ಷೆ ಮತ್ತು ಸಂದರ್ಶನ ಏರ್ಪಡಿಸಲಾಗುತ್ತದೆ.

ಆರಂಭಿಕ ಮೂಲ ವೇತನ 23,700/- ರಿಂದ 42,020/- ಇರುತ್ತದೆ. ಸೆಪ್ಟೆಂಬರ್ 18 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://nhb.org.in ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net