

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ (ಅರಿವು ಕೇಂದ್ರ)ಗಳಲ್ಲಿ ಆಸಕ್ತರಿಗೆ ಖಗೋಳಭೌತಶಾಸ ಮಾಹಿತಿ, ಆಕಾಶಕಾಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸು ಪ್ರೋತ್ಸಾಹಿಸಲು ಖಗೋಳ ಭೌಶಾಸ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು ಆರು ಸಾವಿರ ಅರಿವು ಕೇಂದ್ರಗಳಿವೆ. ಪರಸ್ಪರ ತಿಳಿವಳಿಕೆಗೆ ಸಹಿ ಹಾಕಿ ಪ್ರಕಾರ ಖಗೋಳದಲ್ಲಿ ಅರಿವು ಮೂಡಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಸಂಸ್ಥೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಿದೆ.
ಗ್ರಾಮೀಣ ಪ್ರದೇಶದ ಸಮುದಾಯಗಳಲ್ಲಿ ವಿಜ್ಞಾನ ಸಾಕ್ಷರತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುತ್ತದೆ. ಮೇಲ್ವಿಚಾರಕರ ತರಬೇತಿ ಮತ್ತು ಮಾರ್ಗದರ್ಶನ, ಕನ್ನಡದಲ್ಲಿ ಖಗೋಳ ಸಂಪನ್ಮೂಲಗಳ ರಚನೆ, ಆಕಾಶಕಾಯಗಳ ಘಟನೆಗಳ ಬಗ್ಗೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿದೆ.
ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಡುವೆ ಆಗಿರುವ ಒಪ್ಪಂದದಂತೆ ಬರಿಗಣ್ಣಿನಿಂದ ನೋಡಬಹುದಾದ ಖಗೋಳಘಟನೆಗಳ ಬಗ್ಗೆ ಮತ್ತು ಖಗೋಳದ ವಿವರಗಳನ್ನು ಕನ್ನಡದಲ್ಲಿ ಒದಗಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಖಗೋಳಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ನೀಡುವುದು, ಅರಿವು ಕೇಂದ್ರಗಳಲ್ಲಿನ ಕಂಪ್ಯೂಟರ್ ಲ್ಯಾಬ್‌ಗಳ ಮೂಲಕ ಚರ್ಚೆ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸುವುದು.
ಡಿಜಿಟಲ್ ಪರಿಕರಗಳ ರೂಪದಲ್ಲಿ ಆನ್‌ಲೈನ್ ಸಂವಹನಗಳನ್ನು ಉತ್ತೇಜಿಸುವ ಕಾರ್ಯಕ್ರಮಗಳು, ಸಣ್ಣ ದೂರದರ್ಶಕಗಳ ಬಳಕೆಯ ತರಬೇತಿಯನ್ನೂ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಈ ಒಡಂಬಡಿಕೆಗೆ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ನಿರ್ದೇಶಕರಾದ ಅನ್ನಪೂರ್ಣಿ ಸುಬ್ರಮಣ್ಯಂ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಆಯುಕ್ತ (ಪಂಚಾಯತ್ ರಾಜ್) ಡಾ. ಅರುಂಧತಿ ಚಂದ್ರಶೇಖರ್ ಸಹಿ ಹಾಕಿದರು.