

ಅಹಮದಾಬಾದ್: ಮಿನಿ ಟ್ರಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟಿರುವ ಘಟನೆ ಅಹಮಾದಬಾದ್-ರಾಜ್ಕೋಟ್ ನಡುವಿನ ಬಾವ್ಲಾ-ಬಗೋದರ ಹೆದ್ದಾರಿಯಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಹಮದಮಾದ್ ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವಾಸವ ಮಿನಿ ಟ್ರಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಬಂಧಿಕರೊಬ್ಬರ ಮನೆಯಲ್ಲಿ ಶುಭ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಅಹಮದಮಾದ್ ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.