

Road Accident : ಮದುವೆಯಿಂದ ಹಿಂತಿರುಗುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಜನರು ಪ್ರಾಣ ಕಳೆದುಕೊಂಡರು. ಇತರ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಛತ್ತೀಸ್ಗಢ ರಾಜ್ಯದ ರಾಯ್ಪುರ-ಬಲೋದ್ ಬಜಾರ್ ರಸ್ತೆಯ ಸರಗಾಂವ್ ಬಳಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಚಟೌಡ್ ಗ್ರಾಮದ ಕೆಲವರು ತಮ್ಮ ಕುಟುಂಬ ಸದಸ್ಯರ ಮದುವೆಯಲ್ಲಿ ಪಾಲ್ಗೊಳ್ಳಲು ಚೌಟಿಯಾ ಚಟ್ಟಿ ಗ್ರಾಮಕ್ಕೆ ಹೋಗಿದ್ದರು. ಮದುವೆಯ ನಂತರ ಅವರು ವಾಹನದಲ್ಲಿ ರಾಯ್ಪುರಕ್ಕೆ ತೆರಳಿದರು. ಅವರು ಪ್ರಯಾಣಿಸುತ್ತಿದ್ದ ವಾಹನವು ಬಲೋಡಾ ಬಜಾರ್ ರಸ್ತೆಯ ಸರಗಾಂವ್ ಬಳಿ ಬರುತ್ತಿದ್ದಂತೆ, ವೇಗವಾಗಿ ಬಂದ ಕಾರು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತರಲ್ಲಿ ಒಂಬತ್ತು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರಾಯ್ಪುರ ಎಸ್ಪಿ ಲಾಲ್ ಉಮ್ಮದ್ ಸಿಂಗ್ ತಿಳಿಸಿದ್ದಾರೆ.