ಅಟಲ್ ಜನ್ಮ ಶತಮಾನೋತ್ಸವ ಕಾರ್ಯಕ್ರಮ | Book release tomorrow

Atal centanary
Published on

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ನಿಮಿತ್ತ ರಾಜ್ಯದಲ್ಲಿ ಒಡನಾಡಿದ ಹಿರಿಯರಿಗೆ ಅವರ ಮನೆಯಲ್ಲೇ ಸತ್ಕರಿಸಿದ್ದು, ಅಟಲ್ ನೆನಪಿನ ಬುತ್ತಿಯನ್ನು ಹಂಚಿಕೊಂಡಿದ್ದು, ಸ್ಮರಣ ಸಂಚಿಕೆ ರೂಪದಲ್ಲಿ ಶನಿವಾರ ಬಿಡುಗಡೆಯಾಗಲಿದೆ ಎಂದು ಅಟಲ್ ಜನ್ಮ ಶತಮಾನೋತ್ಸವ ಸಮಿತಿ ರಾಜ್ಯ ಪ್ರಮುಖ, ಮಾಜಿ ಶಾಸಕ ಡಾ.ಎ.ಎಚ್.ಶಿವಯೋಗಿಸ್ವಾಮಿ ತಿಳಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.16 ಅಟಲ್ ಪುಣ್ಯಸ್ಮರಣೆಯ ದಿನವೂ ಹೌದು. ಇದಕ್ಕಾಗಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಅಟಲ್ ಕವನಗಳ ಆಧಾರಿತ ಸ್ವರಸಂಗಮ, ಸ್ಮರಣ ಸಂಚಿಕೆ ಬಿಡುಗಡೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತಿದೆ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ತೇಜಸ್ವಿನಿ ಅನಂತಕುಮಾರ್, ಸಂಸದ, ಶಾಸಕರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಅಟಲ್ ಜನ್ಮ ಶತಾಬ್ಧಿ ನಿಮಿತ್ತ ಏರ್ಪಡಿಸದ್ದ ರಂಗೋಲಿ ನಮನ ಸ್ಪರ್ಧೆಯಲ್ಲಿ 200ಕ್ಕೂ ಹೆಚ್ಚು ಮಹಿಳೆಯರು, ನುಡಿ ನಮನ ಸ್ಪರ್ಧೆಯಲ್ಲಿ 300ಕ್ಕಿಂತ ಹೆಚ್ಚು ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು, ಬರಹ ನಮನ ಸ್ಪರ್ಧೆಯಲ್ಲಿ 350ಕ್ಕೂ ಅಧಿಕ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು ಡಾ.ಎ.ಎಚ್.ಶಿವಯೋಗಿಸ್ವಾಮಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net