ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ, ಕಮ್ಮರಡಿಯಲ್ಲಿ ಪ್ರತಿಭಟನೆ

Protests in Kammaradi
ತೀರ್ಥಹಳ್ಳಿ ತಾಲೂಕಿನ ಕಮ್ಮರಡಿಯಲ್ಲಿ ಹಿಂದೂಪರ ಸಂಘಟನೆಗಳ ಪ್ರಮುಖರು ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ಹಲ್ಲೆ, ದೌರ್ಜನ್ಯ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಕಮ್ಮರಡಿಯಲ್ಲಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಶನಿವಾರ ಸಂಜೆ ತೀರ್ಥಹಳ್ಳಿಯ ಪಟ್ಲ ಫೌಂಡೇಶನ್ ಮಾಲೀಕ ಸತೀಶ್ ರೈ ನೇತೃತ್ವದಲ್ಲಿ ಕಮ್ಮರಡಿಯ ಹಿಂದೂ ಸಂಘಟನೆಗಳ ಪ್ರಮುಖರಾದ ರಾಜಶೇಖರ ಭಟ್, ಹೊನಗಾರ್ ರಾಘಣ್ಣ, ಕುಂಬರಗೋಡು ನಾಗೇಂದ್ರ ಮತ್ತು ಶ್ಯಾಮಸುಂದರ್ ಸೇರಿ ಸುಮಾರು ಹವಲರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net