

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿರುವ ಇಂದಿರಾನಗರ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಸ್ಪಾ ಮ್ಯಾನೇಜರ್ ಮಣಿ ಬಂಧಿತ ಆರೋಪಿ. ಸ್ಪಾ ಮಾಲೀಕ ಉಪ್ಪೇನ್ ರಾಟಿ ಎಂಬಾತ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಠಾಣಾ ವ್ಯಾಪ್ತಿಯಲ್ಲಿರುವ ದೊಮ್ಮಲೂರು ೨ ನೇ ಹಂತದಲ್ಲಿರುವ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೇ ೨೯ ರಂದು ದಾಳಿ ನಡೆಸಿದ ಪೊಲೀಸರು ದಾಳಿ ನಡೆಸಿ ಸ್ಪಾ ಮ್ಯಾನೇಜರ್ ಅನ್ನು ಬಂಧಿಸಿ ಉತ್ತರ ಪ್ರದೇಶ ಮತ್ತು ನಾಗಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಪಾ ಮ್ಯಾನೇಜರ್‌ನನ್ನು ವಿಚಾರಣೆಗೆ ಒಳಪಡಿಸಿದ್ದಾಗ ಸ್ಪಾ ನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಇತ್ಯಾದಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗಿ ತಿಳಿಸಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.