

PM Modi: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲಿನ ದಾಳಿಯು ದೇಶದ ಪ್ರತಿಯೊಬ್ಬ ನಾಗರಿಕರನ್ನು ಕೆರಳಿಸುವ ಖಂಡನೀಯ ಕೃತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆಪ್ಟೆಂಬರ್,06) ಖಂಡಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನು ಗವಾಯಿರೊಂದಿಗೆ ಮಾತನಾಡಿದ್ದು, ದಾಳಿಯ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಅಲ್ಲದೆ, ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಸಿಜೆಐ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಾನವಿಲ್ಲ ಎಂದು ಕಿಡಿಕಾರಿದ್ದಾರೆ.
ಇಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತತೆಯನ್ನು ನಾನು ಮೆಚ್ಚುತ್ತೇನೆ. ಗವಾಯಿ ಅವರ ನ್ಯಾಯದ ಮೌಲ್ಯಗಳಿಗೆ ಬದ್ಧತೆ ಮತ್ತು ನಮ್ಮ ಸಂವಿಧಾನದ ಚೈತನ್ಯವನ್ನು ಬಲಪಡಿಸುವುದನ್ನು ತೋರಿಸಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.
ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್‌ನ ನ್ಯಾಯಾಲಯದ ಕೋಣೆಯಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಸಿಜೆಐ ಕಡೆಗೆ ಶೂ ಎಸೆಯಲು ಪ್ರಯತ್ನಿಸಿದ್ದಾರೆ. ಅಲ್ಲದೆ, ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗುವುದಿಲ್ಲ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಗವಾಯಿ ಘಟನೆಯ ನಂತರ ನ್ಯಾಯಾಲಯದ ಒಳಗೆ ಹಾಜರಿದ್ದ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ಆರೋಪಿ ಕಿಶೋರ್ ದೆಹಲಿಯ ಮಯೂರ್ ವಿಹಾರ್ ನಿವಾಸಿ. ಘಟನೆಯ ನಂತರ, ಪೊಲೀಸರು ಇವರನ್ನು ಬಂಧಿಸಿ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಪೊಲೀಸರು ಯಾವುದೇ ಔಪಚಾರಿಕ ದೂರು ದಾಖಲಿಸಲಿಲ್ಲ. ಪೊಲೀಸರ ಪ್ರಕಾರ, ಕಿಶೋರ್ ನಿಂದ ಭಾರತ ಸನಾತನ ಧರ್ಮಕ್ಕೆ ಅವಮಾನಗಳನ್ನು ಸಹಿಸುವುದಿಲ್ಲ ಎಂದು ಬರೆದಿರುವ ಟಿಪ್ಪಣಿಯನ್ನು ವಶಪಡಿಸಿಕೊಂಡಿದ್ದಾರೆ.
ಕಿಶೋರ್ನನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಮತ್ತು ಶಹದಾರಾ ಬಾರ್ ಅಸೋಸಿಯೇಷನ್‌ನ ಕಾರ್ಡ್ ಅನ್ನು ಸಹ ಹೊಂದಿದ್ದರು. (ಏಜೆನ್ಸೀಸ್)