ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ

BJP Congress
Published on

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು.

ಮಲ್ಲೇಶ್ವರದ ಜಗನ್ನಾಥ ಭವನದತ್ತ ಆಗಮಿಸುತ್ತಿದ್ದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದ ಕಾರ್ಯಕರ್ತರ ತಂಡವನ್ನು ಪೊಲೀಸರು ತಡೆದರು. ಈ ವೇಳೆ ತಳ್ಳಾಟ ನೂಕಾಟ ನಡೆಯಿತು. ನಂತರ ಅವರನ್ನೆಲ್ಲ ವಶಕ್ಕೆ ಪಡೆದ ಪಡೆದರು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಸೌಮ್ಯಾ ರೆಡ್ಡಿ, ಸಿ.ಟಿ.ರವಿ ಸಚಿವೆ ವಿರುದ್ಧ ಕೆಟ್ಟ ಪದ ಬಳಸಿ ಅವಮಾನಿಸಿದ್ದಾರೆ. ಅಂತವರು ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯುವುದು ಸರಿಯಲ್ಲ. ಕೂಡಲೇ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕೆಂಬುದು ನಮ್ಮ ಆಗ್ರಹ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net