ಬಿಜೆಪಿ ಮುಖಂಡ ದೇವರಾಜೇಗೌಡಗೆ ಹನಿಟ್ರ್ಯಾಪ್‌ಗೆ ಯತ್ನ

Crime Logo
Published on

ಬೆಂಗಳೂರು: ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ ಹನಿಟ್ರ್ಯಾಪ್‌ಗೆ ಯತ್ನಿಸಿದ ಆರೋಪದಡಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ದೇವರಾಜೇಗೌಡ ನೀಡಿದ ದೂರಿನನ್ವಯ ಹೊಳೇನರಸಿಪುರ ಪಟ್ಟಣದ ಕೋಟೆ ಬೀದಿಯ ನಿವಾಸಿಗಳಾದ ಜ್ಯೋತಿ, ಇವರ ಪತಿ ಧರ್ಮೇಂದ್ರ ಹಾಗೂ ಗೆಳೆಯ ಬಾಲು ಎಂಬುವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜ್ಯೋತಿ, ಧರ್ಮೇಂದ್ರ ಮತ್ತು ಬಾಲು ಸೇರಿಕೊಂಡು ವಾಟ್ಸ್‌ಆ್ಯಪ್ ಮೂಲಕ ತನಗೆ ವಿಡಿಯೋ ಕಾಲ್ ಮಾಡಿ ಅಶ್ಲಿಲ ವಿಡಿಯೋ ತೋರಿಸಿ ಪ್ರಚೋದನೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡಿದ್ದರು. ರೆಕಾರ್ಡ್ ಮಾಡಿದ ವಿಡಿಯೋ ವೈರಲ್ ಮಾಡದಿರಲು ೨ ಕೋಟಿ ರೂ. ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ. ಹಣ ನೀಡದಿದ್ದರೆ ಮಾಧ್ಯಮಗಳಲ್ಲಿ ವಿಡಿಯೋ ಬಿಡುಗಡೆ ಮಾಡಿ ರಾಜಕೀಯವಾಗಿ ಮಾನ ಹರಾಜು ಹಾಕುತ್ತೇವೆ ಎಂದು ಹೆದರಿಸುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ದೇವರಾಜೇಗೌಡ ಕೋರಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net