ಸಿಜೆಐ ಮೇಲೆ ಶೂ ಎಸೆಯುವ ಯತ್ನ: ಪ್ರತಿಯೊಬ್ಬ ಭಾರತೀಯನಿಗೂ ಕೋಪ ಬಂದಿದೆ ಎಂದು ಘಟನೆಯನ್ನು ಖಂಡಿಸಿದ ಪಿಎಂ ಮೋದಿ| PM Modi

Untitled design - 2025-10-06T214641.510
Published on

StartFragment PM Modi: StartFragment ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆಯುವ ಯತ್ನದ ಘಟನೆ  ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ಇದರಿಂದ ಪ್ರತಿಯೊಬ್ಬ ಭಾರತೀಯನಿಗೂ ಕೋಪ ಬಂದಿದೆ ಎಂದು ಎಕ್ಸ್​ನಲ್ಲಿ ಸೋಮವಾರ(ಅ. 06) ಪೋಸ್ಟ್ ಮಾಡಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, EndFragment ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಕೃತ್ಯಗಳಿಗೆ ಸ್ಥಾನವಿಲ್ಲ. ಇದು ಖಂಡನಾರ್ಹ ಎಂದು ಹೇಳಿದ್ದಾರೆ.

ಇಂತಹ ಪರಿಸ್ಥಿತಿಯನ್ನು ಎದುರಿಸುವಾಗ ಸಿಜೆಐ ಗವಾಯಿ ಅವರು ಪ್ರದರ್ಶಿಸಿದ ಶಾಂತತೆಯನ್ನು ನಾನು ಮೆಚ್ಚಿದೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯವನ್ನು ಬಲಪಡಿಸುವುದಕ್ಕೆ ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್​ನಲ್ಲಿ ನಡೆದಿದ್ದೇನು?

ಇಂದು(ಅ. 06) ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಜೆಐ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ವಕೀಲರೊಬ್ಬರು ತಮ್ಮ ಶೂ ತೆಗೆದು "ಸನಾತನ ಕಾ ಅಪ್ಮಾನ್ ನಹಿ ಸಹೇಂಗೆ (ಸನಾತನ ಧರ್ಮದ ಅವಮಾನವನ್ನು ನಾವು ಸಹಿಸುವುದಿಲ್ಲ)" ಎಂದು ಕೂಗುತ್ತಾ ಅದನ್ನು ಎಸೆಯಲು ಪ್ರಯತ್ನಿಸಿದರು.

ತಕ್ಷಣ ಕೋರ್ಟ್​ನ ಭದ್ರತಾ ಸಿಬ್ಬಂದಿ ಆರೋಪಿ ವಕೀಲನನ್ನು ಹಿಡಿದು ಕೋರ್ಟ್​ನಿಂದ ಆಚೆ ಹಾಕಿತು. ಹಾಗೆಯೇ ಪೊಲೀಸರಿಗೆ ಒಪ್ಪಿಸಿದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ ಇಂತಹ ಘಟನೆಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net