ವಿಷ ಕುಡಿದು ಆತ್ಮಹತ್ಯೆಗೆ ಯತ್ನ

Published on

ಹುಬ್ಬಳ್ಳಿ: ಪಡೆದ ಸಾಲವನ್ನು ಬಡ್ಡಿ ಸಮೇತ ತೀರಿಸಿದರೂ ಮತ್ತಷ್ಟು ಹಣ ಕೊಡಬೇಕೆಂದು ಜೀವ ಬೆದರಿಕೆ ಹಾಕಿದ್ದರಿಂದ ಅಮರಗೋಳದ ಚಾಲಕ ಮಂಜುನಾಥ ಕುಶಮ್ಮನವರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜೇಶ ಉಳವನ್ನವರ, ಜಾವೀದ್ ಧಾರವಾಡ ಮತ್ತು ರೆಹಮಾನ್ ಅವರು ಮಾನಸಿಕ ಕಿರುಕುಳ ನೀಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮಂಜುನಾಥ ಅವರು ಮೂವರು ಆರೋಪಿಗಳಿಂದ ಸಾಲ ಪಡೆದಿದ್ದರು. ಪಡೆದ ಸಾಲಕ್ಕೆ ಅಸಲು ಸಮೇತ ಹೆಚ್ಚು ಹಣ ಪಾವತಿಸಿದ್ದರು. ಆದರೂ, ಮತ್ತಷ್ಟು ಹಣ ನೀಡುವಂತೆ ಒತ್ತಡ ಹಾಕಿದ್ದರು. ಆ. 16ರ ಸಂಜೆಯೊಳಗೆ ಹಣ ಕೊಡದಿದ್ದರೆ ಜೀವ ತೆಗೆಯುವುದಾಗಿ ಹೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net