ಡ್ರೈವಿಂಗ್​ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನ: ಕಾರು ನದಿಗೆ ಬಿದ್ದು ಒಂದೇ ಕುಟುಂಬದ ಐವರು ದುರಂತ ಸಾವು

Road Accident
Published on

ರಾಂಚಿ: ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐದು ಮಂದಿ ದುರಂತ ಸಾವಿಗೀಡಾಗಿರುವ ದಾರುಣ ಘಟನೆ ಜಾರ್ಖಂಡ್​ ರಾಜ್ಯದ ದಿಯೋಘರ್​ನ​ ಸಿಕಾತಿಯಾ​ ಬ್ಯಾರೆಜ್​ನಲ್ಲಿರುವ ಸೇತುವೆಯಲ್ಲಿ ನಡೆದಿದೆ.

ದಿಯೋಘರ್​ನ ಅಸಾನ್ಸೋಲ್​ ಸಂಕುಲ್​ ಗ್ರಾಮದಿಂದ ಗಿರಿಧಿಹ್​ ಜಿಲ್ಲೆಗೆ ತೆರಳುತ್ತಿದ್ದ ಎಸ್​ಯುವಿ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲನೆ ವೇಳೆ ಚಾಲಕ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ನದಿಗೆ ಬಿದ್ದಿತು ಎಂದು ವರದಿಯಾಗಿದೆ. ಚಾಲಕ ಓರ್ಬ ಇಂಜಿನಿಯರ್​ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರ ನೆರವಿನಿಂದ ಕಾರನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಿಯೋಘರ್​ ಸದಾರ್​ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಅಪಘಾತ ಸಂಬಂಧ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ ತಮಿಳುನಾಡಿನಲ್ಲಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತಿರುವಣ್ಣಾಮಲೈನ ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿತು. ಪುದುಚೇರಿ ಗ್ಲ್ಯೂ ತಯಾರಿಕಾ ಕಂಪನಿಯಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೋ ವಾಹನ ತಮಿಳುನಾಡಿನ ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಮೃತ ಏಳರಲ್ಲಿ ಆರು ಮಂದಿ ಅಸ್ಸಾಂ ಮೂಲದ ಕಾರ್ಮಿಕರು. ಉಳಿದ ಒಬ್ಬ ಕಾರ್ಮಿಕ ತಮಿಳುನಾಡು ಮೂಲದವನು. ಮೃತರನ್ನು ಚೆಂಗಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net