ಗಮನ ಸೆಳೆದ ಪಾಲಿಕೆಯ ಉಪಕ್ರಮ

hdmc delhi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಡಾಂಬರ್ ರಸ್ತೆ ನಿರ್ವಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಕೆ ಮಾಡಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿನೂತನ ಉಪಕ್ರಮವು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ವಿಶ್ವ ಪರಿಸರ ದಿನಚಾರಣೆ ಅಂಗವಾಗಿ ಗುರುವಾರ ದೆಹಲಿಯ ಭಾರತ್ ಮಂಟಪಂನಲ್ಲಿ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯ ಉಪಕ್ರಮ ಗಮನ ಸೆಳೆದಿದೆ. ಸದೃಢ ಮತ್ತು ಸುಸ್ಥಿರವಾದ ರಸ್ತೆ ನಿರ್ವಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವ ಬಗ್ಗೆ ವಿಡಿಯೋ ಮತ್ತು ಪಿಪಿಟಿ ಮೂಲಕ ಪ್ರದರ್ಶಿಸಿದರು.

ಇದರೊಂದಿಗೆ ಕಾರ್ಯಕ್ರಮದ ಸ್ಥಳದಲ್ಲಿ ಪಾಲಿಕೆಗೆ ಮಳಿಗೆಯನ್ನು ಹಂಚಿಕೆ ಮಾಡಲಾಗಿತ್ತು. ಅಲ್ಲಿ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ರಸ್ತೆ ನಿರ್ವಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವ ವಿಧಾನವನ್ನು ವಿವರಿಸಲಾಯಿತು. ಈ ಬಗ್ಗೆ ವೀಕ್ಷಕರು ಪಾಲಿಕೆಯ ಉಪಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ಲಾಸ್ಟಿಕ್ ಮುಕ್ತ ಅವಳಿ ನಗರ ಎಂಬ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಧ್ಯೇಯ ರಾಷ್ಟ್ರ ರಾಜಧಾನಿಯಲ್ಲಿ ಗುರುತಿಸಲ್ಪಟ್ಟಿತು.

ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ, ಆಯುಕ್ತ ಡಾ. ರುದ್ರೇಶ ಘಾಳಿ, ಹೆಚ್ಚುವರಿ ಆಯುಕ್ತ ಆರ್. ವಿಜಯಕುಮಾರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net