

ಬೆಂಗಳೂರು: ಬೆಂಗಳೂರಿನ ನಾಗರಿಕರೇ ಗಮನಿಸಿ, ಪ್ರತಿದಿನ ಲಕ್ಷಾಂತರ ಪ್ರಯಾಣಿಕರ ಒಡನಾಡಿಯಾಗಿರುವ ನಮ್ಮ ಮೆಟ್ರೋ ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಜೂನ್ 17ರಂದು (ಸೋಮವಾರ) ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆ ಅಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಮೂಲಕ ಪ್ರಯಾಣಿಕರಿಗೆ ಸೂಚನೆ ನೀಡಿದೆ.
ಕಾಮಗಾರಿ ನಡೆಯುವುದರಿಂದ ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸೋಮವಾರದಂದು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಸ್ಥಗಿತಗೊಳ್ಳಲಿವೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆಯ ಬಳಿಕ ಚಲ್ಲಘಟ್ಟ to ವೈಟ್‌ಫೀಲ್ಡ್ ನಡುವೆ ಮೆಟ್ರೋ ಸಂಚಾರ ಪ್ರಯಾಣಕರಿಗೆ ಲಭ್ಯವಿರಲಿದೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ. ಪ್ರಯಾಣಿಕರ ಅನಾನುಕೂಲಕ್ಕೆ ವಿಷಾದಿಸುತ್ತೇವೆಂದು ಬಿಎಂಆರ್‌ಸಿಎಲ್ ತಿಳಿಸಿದೆ.