

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ರಾಷ್ಟ್ರಪ್ರಶಸ್ತಿ ವಿಜೇತೆ, ನಟಿ ಆಲಿಯಾ ಭಟ್ ಜೋಡಿಯಾಗಿ ನಟಿಸಿದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಚಿತ್ರ ಇದೀಗ ಒಟಿಟಿಗೆ ಲಗ್ಗೆಯಿಟ್ಟಿದ್ದು, ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಗೊಂಡಿದೆ. ಆದ್ರೆ, ಈ ಬಗ್ಗೆ ಸಿನಿಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಸಿನಿಪ್ರೇಕ್ಷಕರನ್ನು ಮನರಂಜಿಸಿದ ಬಾಲಿವುಡ್ ಬ್ಲಾಕ್ಬಸ್ಟರ್ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಇದೀಗ ಅಮೆಜಾನ್ ಪ್ರೈಮ್ನಲ್ಲಿ ರಿಲೀಸ್ ಆಗಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಆದ್ರೆ, ಚಿತ್ರವನ್ನು ವೀಕ್ಷಿಸಲು 349 ರೂ. ಪಾವತಿ ಮಾಡಬೇಕು ಎಂಬ ಸಂಗತಿ ಮಾತ್ರ ತೀವ್ರ ಬೇಸರವನ್ನು ಮೂಡಿಸಿದೆ.
ಕರಣ್ ಜೋಹರ್ ನಿರ್ದೇಶನದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಚಿತ್ರದಲ್ಲಿ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಧರ್ಮೇಂದ್ರ, ಅಂಜಲಿ ಆನಂದ್, ಶಬ್ಬಾನ ಅಜ್ಮಿ, ಜಯಾ ಬಚ್ಚನ್, ಚುರ್ನಿ ಗಂಗೂಲಿ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ,(ಏಜೆನ್ಸೀಸ್).