ಪತ್ರದ ಸೃಷ್ಟಿಕರ್ತರು ನೀವೋ? ಅಥವಾ ನಿಮ್ಮ ಬ್ರದರ್ರೋ?; ಕೆಣಕಿದ ಸಿದ್ದು

Siddaramaiah
Published on

ಬೆಂಗಳೂರು: ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ ಬ್ರದರೋ? ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಕೆಣಕಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳಿಂದ ಸಚಿವ ಚಲುವರಾಯಸ್ವಾಮಿ ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಆಧಾರದಲ್ಲಿ ಕ್ರಮಕೈಗೊಳ್ಳುವಂತೆ ರಾಜಭವನ ರಾಜ್ಯಪಾಲರಿಗೆ ಸೂಚಿಸಿದ ಎನ್ನಲ್ಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು.

ಇದೇ ವಿಚಾರ ಇಟ್ಟುಕೊಂಡು ಬಿಜೆಪಿಯು ಟ್ವೀಟ್ ಮಾಡಿ, ಸಚಿವ ಚಲುವರಾಯಸ್ವಾಮಿ ಅವರ ರಾಜೀನಾಮೆ ಪಡೆಯಲು ರಾಹುಕಾಲಕ್ಕೆ ಕಾಯುತ್ತಿದ್ದೀರಾ ಎಂದು ಮುಖ್ಯಮಂತ್ರಿಯವರನ್ನು ಕೆಣಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಜತೆಗೆ ಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ ಬ್ರದರೋ? ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಕೆಣಕಿದ್ದಾರೆ. ಈ ಮೂಲಕ ಕುಮಾರಸ್ವಾಮಿಯವರತ್ತ ಪರೋಕ್ಷವಾಗಿ ಬೊಟ್ಟು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net