ರಸ್ತೆ ತಿರುವಿನಲ್ಲಿ ಲಗೇಜ್​ ಆಟೋ ಪಲ್ಟಿ: ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

Untitled-1
Published on

ರಾಮನಗರ: ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದ ರತ್ನಮ್ಮ(53), ಲಕ್ಕಮ್ಮ(40) ಮತ್ತು ಮಂಜುನಾಥ್(32) ಮೃತ ದುರ್ದೈವಿಗಳು. ತರಕಾರಿ ತರಲೆಂದು 6 ಮಂದಿ ಲಗೇಜ್​ ಆಟೋದಲ್ಲಿ ಭಾನುವಾರ ರಾತ್ರಿ ಬೆಳ್ಳೂರು ಕ್ರಾಸ್​ನಿಂದ ನೆಲಮಂಗಲಕ್ಕೆ ಹೋಗುವಾಗ ಮಾರ್ಗಮಧ್ಯೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ರಂಗಣ್ಣ, ದರ್ಶನ್ ಹಾಗೂ ಚಾಲಕ ಸತೀಶ್​ ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ.

ಮೂವರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net