ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ಬೇಡ

IMG-20231214-WA0093
Published on

ಹನಗೋಡು: ಆದಿವಾಸಿ ಬುಡಕಟ್ಟು ಸಮುದಾಯದ ಜನರು ತಮ್ಮ ಮಕ್ಕಳಿಗೆ ಚಿಕ್ಕವಯಸ್ಸಿನಲೇ ಮದುವೆ ಮಾಡದೆ ಪ್ರಾಪ್ತ ವಯಸ್ಸಿಗೆ ಬಂದ ನಂತರ ವಿವಾಹ ಮಾಡಿ. ಮಕ್ಕಳನ್ನು ಮಾದಕ ವಸ್ತುಗಳ ದುಶ್ಚಟಗಳಿಂದ ದೂರವಿಡಿ ಎಂದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎನ್.ಮುನಿಯಪ್ಪ ಸಲಹೆ ನೀಡಿದರು.


ಹನಗೋಡು ಹೋಬಳಿಯ ಮಂಗಳೂರು ಮಾಳ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಆದಿವಾಸಿ ಜನಾಂಗದಲ್ಲಿ ಹೆಚ್ಚು ಬಾಲ್ಯ ವಿವಾಹಗಳಾಗುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ಈ ಬಗ್ಗೆ ಪಾಲಕರು ತಮ್ಮ ಮಕ್ಕಳು ಪ್ರಾಪ್ತ ವಯಸ್ಸಿಗೆ ಬಂದ ನಂತರ ಮದುವೆ ಮಾಡಬೇಕು. ಬಾಲ್ಯ ವಿವಾಹ ಮಾಡಿದರೆ ಶಿಕ್ಷೆಗೆ ಗುರಿಯಾಗುತ್ತೀರಿ. ಮದ್ಯ, ಗಾಂಜಾ ಮುಂತಾದ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬೇಡಿ. ಅದಿವಾಸಿ ಕುಟುಂಬಗಳಿಗೆ ಸರ್ಕಾರ ಎಲ್ಲ ನೆರವು ನೀಡುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.


ಗ್ರಾಪಂ ಸದಸ್ಯರಾದ ರಾಮು, ಸಾವಿತ್ರಿಬಾಯಿ, ಮುಖಂಡರಾದ ಧರ್ಮ, ಶಿವಾಜಿ, ಅಬು, ರಾಣಾಬಾಯಿ, ಲಕ್ಷ್ಮೀಬಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net